ವಿಷಯಕ್ಕೆ ಹೋಗಿ

ಭಾರತಿ ಮದಭಾವಿ ಅವರ ಕವಿತೆ "ಮಳೆ ಹನಿಗಳೊಂದಿಗೆ....."

ಮಳೆ ಹನಿಗಳೊಂದಿಗೆ.... 
ಹಚ್ಚ ಹಸಿರಿನೆಲೆಗಳ ಮೇಲೆ 
ಮಳೆ ನೀರ ಹನಿಗಳು 
ಮುತ್ತಾಗಿ ಮನ ಸೂರೆಗೊಂಡಿರೆ 
ಮನದಲ್ಲೇನೋ ಪುಳಕ... 

ಧರೆಯ ಮೇಲೆ ಸುರಿವ ಮಳೆಯ 
ಸೃಷ್ಟಿ ಸೊಬಗಿನೈಸಿರಿ ಕಾಣಲು 
ಅದ್ಬುತ ಲೋಕದಾ ಹೊನಲು 
ಬೆಳಕಿನಾಟಕೆ ಮನದಲ್ಲೇನೋ ಪುಳಕ... 

ಹರ್ಷ ಪಡುವ ಮನದಲ್ಲೇ 
ಆತಂಕದ ಛಾಯೆ ಮೂಡಿ 
ಅಪಸ್ವರವು ಕಾಣಲು 
ಒಳಒಳಗೆ ಮುದುರಿ ಮತ್ತೆ 
ಹೊಸ ಬಗೆಯ ಆಸೆಮೂಟೆಗಳ 
ಬಿಚ್ಚಿ ಮನ ಹಗುರಾಗಲು 
ಮನದಲ್ಲೇನೋ ಸಂತಸದ ಪುಳಕ..... 

ಹೊಸ ಬಗೆಯ ಸಿಂಚನದ ಜೊತೆಗೆ 
ಬೆರೆತು ಹನಿ ಸದ್ದಿನೊಂದಿಗೆ 
ಹೊಸ ರಾಗ ನುಡಿಯುತಿದೆ ಎದೆಯಬಡಿತ.

-ಭಾರತಿ ಮದಭಾವಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ನೊಳಂಬರ ಇತಿಹಾಸ

ನೊಳಂಬ ಕರ್ನಾಟಕದ ಈಗಿನ ಚಿತ್ರದುರ್ಗ ಜಿಲ್ಲೆ ಮತ್ತು ಅದರ ಸುತ್ತ ಮುತ್ತಣ ಪ್ರದೇಶವನ್ನೊಳಗೊಂಡಿದ್ದ ನೊಳಂಬಳಿಗೆ ಸಾಸಿರ ಎಂಬ ಪ್ರಾಂತ್ಯದ ಅಧಿಪತಿಗಳಾಗಿ 8ನೆಯ ಶತಮಾನದಲ್ಲಿ ಆಳ್ವಿಕೆಯನ್ನಾರಂಭಿಸಿ, ಮುಂದಿನ ಎರಡು ಶತಮಾನಗಳಲ್ಲಿ ಪ್ರಾಬಲ್ಯಗಳಿಸಿ, ಈಗಿನ ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು, ಜಿಲ್ಲೆಗಳನ್ನೂ ನೆರೆಯ ಅನಂತಪುರ, ಚಿತ್ತೂರು, ಧರ್ಮಪುರಿ ಜಿಲ್ಲೆಗಳನ್ನೂ ಒಳಗೊಂಡಿದ್ದ ನೊಳಂಬವಾಡಿ 32000 ಪ್ರಾಂತ್ಯದ ಪ್ರಭುಗಳಾಗಿ 11ನೆಯ ಶತಮಾನದ ಮಧ್ಯದವರೆಗೆ ಆಳ್ವಿಕೆ ನಡೆಸಿದ ಸಾಮಂತ ರಾಜರ ಮನೆತನ. ತಲಕಾಡಿನ ಗಂಗರೂ ರಾಷ್ಟ್ರಕೂಟರೂ ಕಲ್ಯಾಣ ಚಾಳುಕ್ಯರೂನೊಳಂಬರಿಗೆ ಸ್ವಲ್ಪಕಾಲ ಅಧೀನರಾಗಿದ್ದರು. ಕದಂಬ, ಗಂಗ ಮತ್ತು ಕಲ್ಯಾಣ ಚಾಳುಕ್ಯರೊಂದಿಗೆ ಇವರು ವಿವಾಹ ಸಂಬಂಧ ಬೆಳೆಸಿದ್ದರು. ಬಾಣರು, ವೈದುಂಬರು, ಚೋಳರು ಮುಂತಾದವರಿಗೂ ಇವರಿಗೂ ರಾಜಕೀಯ ಸಂಬಂಧವಿತ್ತು. ನದಿಯ ಲಾಂಛನ ಹೊಂದಿದ್ದ ಇವರ ರಾಜಧಾನಿ ಪೆಂಜೀರು ಅಥವಾ ಹೆಂಜೇರು. ಆಂಧ್ರ ಪದೇಶದ ಅನಂತಪುರ ಜಿಲ್ಲೆಯ ಹೇಮಾವತಿಯೇ ಇದೆಂದು ಗುರುತಿಸಲಾಗಿದೆ. ನೊಳಂಬ ಎಂಬ ಹೆಸರು ಹೇಗೆ ಬಂತೆಂಬುದು ಸ್ಪಷ್ಟವಾಗಿಲ್ಲ. ಈಶ್ವರ ವಂಶಜನಾದ ಕಂಚೀಪತಿ ಎಂದು ಶಾಸನವೊಂದರಲ್ಲಿ ವರ್ಣಿತನಾಗಿರುವ ತ್ರಿಣಯನ ಪಲ್ಲವ ಎಂಬುವನು ನೊಳಂಬರ ಮೂಲಪುರುಷ. ಇವನ ವಂಶದಲಿ ಹುಟ್ಟಿದವನು ಮಂಗಳ ನೊಳಂಬಾಧಿ ರಾಜ (ಸು. 730-ಸು. 775). ಹೇಮಾವತಿ ಶಾಸನದ ಪ್ರಕಾರ ಇವನು ಕಿರಾತ ನೃಪತಿಯನ್ನು ಜಯಿಸಿದ; ಕರ್ಣಾಟರಿಂ...

ಕರ್ನಾಟಕದ ಪ್ರದರ್ಶನ ಕಲೆಗಳು OEC HISTORY

ಕರ್ನಾಟಕದ ಜಾನಪದ ಕಲೆಗಳು ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ. ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸಬೇಕಾದ ಅಗತ್ಯವಿದೆ. ಅನೇಕ ಗ್ರಾಮೀಣ ಕಲೆ ಮತ್ತು ಆಚರಣೆಗಳು ಸಮಾಜದ ಮುಖ್ಯವಾಹಿನಿಗೆ ಬಾರದೆ ಎಲೆಮರೆಯ ಕಾಯಾಗಿ ಮರೆಯಲ್ಲಿಯೇ ಅಳಿದು ಹೋಗುತ್ತಿವೆ. ಅದರ ಸೊಗಡನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಇದರ ಸವಿಯನ್ನು ಉಳಿಸಿ ಉಣಬಡಿಸುವ ಗುರುತರವಾದ ಜವಾಬ್ದಾರಿಯು ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ. ವೀರಗಾಸೆ ವೀರಗಾಸೆಯು ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಒಂದು ಜನಪದ ಕಲೆ. ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ನೃತ್ಯದ ನಡುವೆ ಕನಿಷ್ಠ ಎರಡು ಜನ ಕಲಾವಿದರುಗಳು ಸೇರಿ ಒಡಪು ಹೇಳುವ ಕಾರ್ಯಕ್ರಮ ನಡೆಸಿಕೊಟ್ಟರೆ, ಗರಿಷ್ಠ ಮೂವತ್...

jain centers in Karnataka

Top 10 Must Visit Jain Monuments In Karnataka JULY 10, 2018  BY  MADUR There are many Jain monuments in Karnataka. Jainism may not have originated in Karnataka but it has a long association with the state that dates back to the 3rd century BC.  When Chandragupta Maurya renounced his kingdom to become a monk, he traveled to the Chandragiri Hill region in Karnataka. The Jain temples, stambhas and Gommata statues are important not only for their religious significance but also for their architecture and design. Come, let’s explore the Jain monuments in Karnataka. It was here that he spent the rest of his life. A number of rulers of south India also were patrons of the religion. This included rulers from the Chalukya, Kadamba and Hoysala Kingdom. It is because of their patronage that Karnataka today is home to a number of Jain monuments. 1. Savira kambagala basadi Also known as the  Chandranatha Temple , this temple is noted for its design which includes 1000 pillars. It...