ದುರ್ಗಸಿಂಹ ನು ತನ್ನವಿಚಾರವನ್ನು ತನ್ನಕೃತಿಯಲ್ಲಿ ಕನ್ನಡದ ಆದಿ ಕವಿ ಪಂಪ ನ ಹಾಗೆ ವಿವರವಾಗಿ ನಿವೇದಿಸಿಕೊಂಡಿರುವುದರಿಂದ ಕವಿಚರಿತೆಯನ್ನು ತಿಳಿದುಕೊಳ್ಳಲು ಕಷ್ಟವಾಗುವುದಿಲ್ಲ. ಅವನು ತನ್ನ ಊರು ಕರ್ನಾಟಕದ ಸಯ್ಯಡಿಯ ಅಗ್ರಹಾರವೆಂದು ಹೇಳಿದ್ದಾನೆ. ‘ಛಂದೋಂಬು ಯನ್ನು ಬರೆದ ನಾಗವರ್ಮನ ಊರು ಅದೇ ಆಗಿದೆ. ಅದು ಕಿಸುಕಾಡುನಾಡಿನಲ್ಲಿದೆ ಎಂದು ಅವನು ಹೇಳಿದ್ದಾನೆ. ಆ ಸಯ್ಯಡಿಯಲ್ಲಿ ತನ್ನ ಚಕ್ರವರ್ತಿಯ ಆಜ್ಞೆಯಂತೆ ಹರಿಹರಭವನಗಳನ್ನು ದುರ್ಗಸಿಂಹನು ಕಟ್ಟಿಸಿದನಂತೆ, ಸಯ್ಯಡಿ ಇಂದು ಧಾರವಾಡ ಜಿಲ್ಲೆಯ ರೋಣ ತಾಲ್ಲೂಕಿನಲ್ಲಿದೆ. ದುರ್ಗಸಿಂಹನು ಪದ್ಯಗಳು ಸೂಕ್ತಿ ಸುಧಾರ್ಣವದಲ್ಲಿ ದೊರಕುವುದರಿಂದ ದುರ್ಗಸಿಂಹನು ಕ್ರಿ.ಶ. ೧೧೩೯ ರಿಂದ ಕ್ರಿ.ಶ. ೧೧೪೯ರ ವರೆಗೆ ಆಳಿದ ಚಾಲುಕ್ಯ ಜಗದೇಕಮಲ್ಲನಲ್ಲಿ ಸಂಧಿವಿಗ್ರಹಿಯಾಗಿದ್ದಿರಬೇಕೆಂದೂ ಆದರಿಂದ ಇವನ ಕಾಲವು ಕ್ರಿ.ಶ.ಸು. ೧೧೪೫ ಆಗಿದ್ದಿರಬೇಕೆಂದೂ ಕವಿಚರಿತ್ರೆಯ ಪ್ರಥಮ ಸಂಪುಟದಲ್ಲಿ ಶ್ರೀ ಆರ್. ನರಸಿಂಹಾಚಾರ್ಯರು ನಿರ್ಣಯಿಸಿದ್ದರು. ಈ ಅಭಿಪ್ರಾಯವನ್ನೇ ಶ್ರೀ ಎಸ್. ಜಿ. ನರಸಿಂಹಾಚಾರ್ಯರ ಆವೃತ್ತಿಯ ಪೀಠಿಕೆಯಲ್ಲಿ ಉಲ್ಲೇಖಿಸಲಾಗಿದೆ. ಶ್ರೀ ರಾಜಪುರೋಹಿತರು ಒಂದನೆಯ ಜಗದೇಕಮಲ್ಲ ಜಯಸಿಂಹನ ಆಳ್ವಿಕೆಯ ಕಾಲದಲ್ಲಿ ಎಂದರೆ ಕ್ರಿ.ಶ. ೧೦೩೭-೧೦೪೨ರ ಅವಯಲ್ಲಿ ದುರ್ಗಸಿಂಹನು ತನ್ನ ಕೃತಿಯನ್ನು ರಚಿಸಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಡಾ.ರಂ. ಶ್ರೀ. ಮುಗಳಿಯವರು ಸು.ಕ್ರಿ.ಶ. ೧೦೩೦ ಎನ್ನುತ...
ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಸಂಶೋಧನಾ ವೇದಿಕೆ. ಶಂಕರ ನಿಂಗನೂರ