ವಿಷಯಕ್ಕೆ ಹೋಗಿ

Study of history for exam success


Study of history for exam success



ಇತಿಹಾಸವನ್ನು ಓದುವುದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಮಾತ್ರವಲ್ಲ, ಪ್ರಾಚೀನ ಕಾಲದಿಂದ ಹಿಡಿದು ಸ್ವಾತಂತ್ರ್ಯದ ನಂತರ ಹಾಗೂ ಪ್ರಸ್ತುತ ಭಾರತ ಹೇಗೆ ರೂಪುಗೊಂಡಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಲು ಅವಶ್ಯಕ. ಇತಿಹಾಸ ಎಲ್ಲಾ ಅನ್ವಯಿಕ ಶಾಸ್ತ್ರಗಳೊಂದಿಗೆ ಕ್ರಮಬದ್ಧವಾಗಿ ಸಂಬಂಧ ಹೊಂದಿದ್ದು, ಆ ವಿಭಾಗಗಳಲ್ಲಿ ಕಾಲಕಾಲಕ್ಕೆ ಜರುಗುವ ಮಹತ್ವದ ಘಟನಾವಳಿಗಳು, ತ್ಯಾಗ ಬಲಿದಾನಗಳು, ಸಾಧನೆಗಳು, ತಿರುವುಗಳು, ಸಂಶೋಧನೆಗಳ ಫಲ ಇವುಗಳೆಲ್ಲವನ್ನೂ ದಾಖಲಿಸುತ್ತದೆ. ಇದು ಕೇವಲ ಚಕ್ರವರ್ತಿ, ರಾಜರು, ರಾಜಕೀಯ ನಾಯಕರ ಕಥೆಯಾಗಿರದೇ, ಆ ಕಾಲಘಟ್ಟದಲ್ಲಿನ ಮಹತ್ತರ ವಿಷಯಗಳಾಗಿದ್ದು, ಕಾಲಾನುಕ್ರಮಣಿಕೆಯಲ್ಲಿ ಹೊಂದಿಸಿಕೊಂಡು, ಪ್ರಸ್ತುತದೊಂದಿಗೆ ತುಲಾನಾತ್ಮಕ ಅಧ್ಯಯನ ಮಾಡಿದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಖಂಡಿತ.

ಇತಿಹಾಸದಿಂದ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ 15 ರಿಂದ 20 ಪ್ರಶ್ನೆಗಳನ್ನು ಕೇಳಲಾಗುತ್ತಿದ್ದು, ವಿಷಯವನ್ನು ಕ್ರಮಬದ್ಧವಾಗಿ ಓದುವುದರಿಂದ ಉತ್ತಮ ಅಂಕಗಳನ್ನು ಪಡೆಯಬಹುದು.


 ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ಮುನ್ನ ಪಠ್ಯಕ್ರಮದ ಪ್ರತಿಯನ್ನು ಇಟ್ಟುಕೊಂಡು, ಹಲವಾರು ಬಾರಿ ಓದಿ ಮನನ ಮಾಡಿಕೊಂಡು, ಓದಲು ಬೇಕಾಗುವ ಪುಸ್ತಕಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಇತಿಹಾಸದ ಮೂಲ ವಿಷಯಗಳಿಗೆ ರಾಜ್ಯ ಸರ್ಕಾರದ 6 ರಿಂದ 12ನೇ ತರಗತಿಯವರೆಗಿನ ಪಠ್ಯ ಪುಸ್ತಕಗಳು (ktbs.kar.nic.in ನಲ್ಲಿ ಲಭ್ಯ), ಎರಡು ಮಾಧ್ಯಮಗಳಲ್ಲಿ ಲಭ್ಯವಿದ್ದು, ಇಂಗ್ಲಿಷ್‌ ಮಾಧ್ಯಮದಲ್ಲಿರುವ ಹಳೆಯ ಮತ್ತು ಹೊಸ ರೆಫರೆನ್ಸ್‌ 5 ರಿಂದ 10ನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಮೂರು-ನಾಲ್ಕು ಬಾರಿ ಓದಬೇಕು. ನಂತರ ಹೆಚ್ಚಿನ ಮತ್ತು ವಿಸ್ತಾರವಾದ ವಿಷಯ ಅಧ್ಯಯನಕ್ಕೆ ರೆಫರೆನ್ಸ್‌ ಪುಸ್ತಕಗಳನ್ನು ಓದಬೇಕು.

l India's Ancient Past - R.S. Sharma

l History & Medieval India- Statistic Satish Chandra

l India's Struggle for Independence - Bipin Chandra

l A Brief History & Modern India - Spectrum

l A concise History of Karnataka- Dr. Surya U. Kamath

ಮೇಲಿನ ಎಲ್ಲಾ ಪುಸ್ತಕಗಳು ಇಂಗ್ಲಿಷ್‌ ಮಾಧ್ಯಮದ ಅಭ್ಯರ್ಥಿಗಳಿಗೆ ಲಭ್ಯ. ಈ ಪುಸ್ತಕಗಳು ಯುಪಿಎಸ್‌ಸಿ ಮಟ್ಟದಲ್ಲಿದ್ದು ಎಲ್ಲಾ ಪರೀಕ್ಷೆಗಳಿಗೂ ಓದಬಹುದು.

ಕನ್ನಡದ ಮಾಧ್ಯಮದಲ್ಲಿ ಈ ಕೆಳಗಿನ ಪುಸ್ತಕಗಳು ಲಭ್ಯ.

l ಕೆಎನ್‌ಎ ರವರ ಪುಸ್ತಕಗಳು

l ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಭಾರತದ ಇತಿಹಾಸ - ಡಾ. ಕೆ. ಸದಾಶಿವ

l ಸಮಗ್ರ ಕರ್ನಾಟಕ ಇತಿಹಾಸ - ಪಾಲಾಕ್ಷ

l ಕರ್ನಾಟಕ ಕೈಗನ್ನಡಿ - ಸೂರ್ಯನಾಥ ಕಾಮತ್

l ಕರ್ನಾಟಕ ಏಕೀಕರಣ ಇತಿಹಾಸ - ಎಚ್‌.ಎಸ್‌.

ಸ್ವಾತಂತ್ರ್ಯ ಗಂಗೆಯ ಸಾವಿರ ತೊರೆಗಳು - ಚಿ. ಶಂಕರರಾವ್

l ಸಮಗ್ರ ಸ್ಪರ್ಧಾ ಇತಿಹಾಸ - ಸೋಮಪ್ಪ ಎಸ್. ದುಂಡಿಗೇರಿ

ಇತಿಹಾಸವನ್ನು ಓದುವಾಗ ಕಾಲಾನುಕ್ರಮ (ಕ್ರೊನೊಲಜಿ) ಗಳ ಬಗ್ಗೆ ಪಟ್ಟಿ ಮಾಡಿ. ಅದರಲ್ಲಿ ಇಸವಿ, ರಾಜಮನೆತನ, ಪ್ರಮುಖ ರಾಜರು, ರಾಜ ಲಾಂಛನಗಳು, ಸುಧಾರಣೆಗಳು, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಇತರ ಪ್ರಮುಖ ವಿಷಯಗಳನ್ನು ಕೋಷ್ಠಕ ರೂಪದಲ್ಲಿ ತಯಾರಿಸಿ ಓದುವ ಸ್ಥಳದಲ್ಲಿ ಅಂಟಿಸಿ ಪದೇ ಪದೇ ನೋಡುವುದರಿಂದ ಇಡೀ ಮಾಹಿತಿಯನ್ನು ಕಾಲಾನುಕ್ರಮದಲ್ಲಿ ನೆನಪಿನಲ್ಲಿಟ್ಟುಕೊಳ್ಳಬಹುದು. ಪ್ರಾಚೀನ, ಮಧ್ಯಕಾಲಿನ ಮತ್ತು ಆಧುನಿಕ ಇತಿಹಾಸಗಳ ಬಗ್ಗೆ ವಿವಿಧ ಕೋಷ್ಠಕಗಳನ್ನು ವಿವಿಧ ಬಣ್ಣಗಳಲ್ಲಿ ನೋಡಲು ಮತ್ತು ಓದಲು ಸುಂದರವಾಗಿ ಕಾಣುವಂತೆ ರಚಿಸಿಕೊಳ್ಳಬಹುದು.

ಕೀ ವರ್ಡ್‌ಗಳನ್ನು ಗುರುತಿಸಿ ಗೆರೆಯನ್ನು ಎಳೆದುಕೊಳ್ಳಿ, ಫ್ಲೋ ಚಾರ್ಟ್‌ಗಳನ್ನು ಕೂಡ ತಯಾರಿಸಿ ಮಾಹಿತಿಯನ್ನು ಜ್ಞಾಪಕದಲ್ಲಿ ಇಟ್ಟುಕೊಳ್ಳಬಹುದು.

ಪ್ರತಿ ಅಧ್ಯಾಯದ ನಂತರ ಅದಕ್ಕೆ ಸಂಬಂಧಪಟ್ಟಂತೆ ಯಾವ ಪ್ರಶ್ನೆಗಳು ಬರಬಹುದೆಂಬ ಊಹೆಯನ್ನು ಮಾಡಿ, ಅಂತಹ ಪ್ರಶ್ನೆಗಳಿಗೆ ತಯಾರಿ ಮಾಡಿಕೊಳ್ಳಿ. ಪರೀಕ್ಷೆಗೆ ಮುನ್ನ ಪುನರ್‌ಮನನ ಮಾಡಿ, ಹಳೆಯ ಪ್ರಶ್ನೆಪತ್ರಿಕೆಗಳನ್ನು ಬಿಡುಸುವುದರಿಂದ, ಗುಂಪು ಚರ್ಚೆಯಿಂದ ಅಭ್ಯರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿ, ಯಾವುದೇ ಆಂತಕಿರುವುದಿಲ್ಲ
   

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ನೊಳಂಬರ ಇತಿಹಾಸ

ನೊಳಂಬ ಕರ್ನಾಟಕದ ಈಗಿನ ಚಿತ್ರದುರ್ಗ ಜಿಲ್ಲೆ ಮತ್ತು ಅದರ ಸುತ್ತ ಮುತ್ತಣ ಪ್ರದೇಶವನ್ನೊಳಗೊಂಡಿದ್ದ ನೊಳಂಬಳಿಗೆ ಸಾಸಿರ ಎಂಬ ಪ್ರಾಂತ್ಯದ ಅಧಿಪತಿಗಳಾಗಿ 8ನೆಯ ಶತಮಾನದಲ್ಲಿ ಆಳ್ವಿಕೆಯನ್ನಾರಂಭಿಸಿ, ಮುಂದಿನ ಎರಡು ಶತಮಾನಗಳಲ್ಲಿ ಪ್ರಾಬಲ್ಯಗಳಿಸಿ, ಈಗಿನ ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು, ಜಿಲ್ಲೆಗಳನ್ನೂ ನೆರೆಯ ಅನಂತಪುರ, ಚಿತ್ತೂರು, ಧರ್ಮಪುರಿ ಜಿಲ್ಲೆಗಳನ್ನೂ ಒಳಗೊಂಡಿದ್ದ ನೊಳಂಬವಾಡಿ 32000 ಪ್ರಾಂತ್ಯದ ಪ್ರಭುಗಳಾಗಿ 11ನೆಯ ಶತಮಾನದ ಮಧ್ಯದವರೆಗೆ ಆಳ್ವಿಕೆ ನಡೆಸಿದ ಸಾಮಂತ ರಾಜರ ಮನೆತನ. ತಲಕಾಡಿನ ಗಂಗರೂ ರಾಷ್ಟ್ರಕೂಟರೂ ಕಲ್ಯಾಣ ಚಾಳುಕ್ಯರೂನೊಳಂಬರಿಗೆ ಸ್ವಲ್ಪಕಾಲ ಅಧೀನರಾಗಿದ್ದರು. ಕದಂಬ, ಗಂಗ ಮತ್ತು ಕಲ್ಯಾಣ ಚಾಳುಕ್ಯರೊಂದಿಗೆ ಇವರು ವಿವಾಹ ಸಂಬಂಧ ಬೆಳೆಸಿದ್ದರು. ಬಾಣರು, ವೈದುಂಬರು, ಚೋಳರು ಮುಂತಾದವರಿಗೂ ಇವರಿಗೂ ರಾಜಕೀಯ ಸಂಬಂಧವಿತ್ತು. ನದಿಯ ಲಾಂಛನ ಹೊಂದಿದ್ದ ಇವರ ರಾಜಧಾನಿ ಪೆಂಜೀರು ಅಥವಾ ಹೆಂಜೇರು. ಆಂಧ್ರ ಪದೇಶದ ಅನಂತಪುರ ಜಿಲ್ಲೆಯ ಹೇಮಾವತಿಯೇ ಇದೆಂದು ಗುರುತಿಸಲಾಗಿದೆ. ನೊಳಂಬ ಎಂಬ ಹೆಸರು ಹೇಗೆ ಬಂತೆಂಬುದು ಸ್ಪಷ್ಟವಾಗಿಲ್ಲ. ಈಶ್ವರ ವಂಶಜನಾದ ಕಂಚೀಪತಿ ಎಂದು ಶಾಸನವೊಂದರಲ್ಲಿ ವರ್ಣಿತನಾಗಿರುವ ತ್ರಿಣಯನ ಪಲ್ಲವ ಎಂಬುವನು ನೊಳಂಬರ ಮೂಲಪುರುಷ. ಇವನ ವಂಶದಲಿ ಹುಟ್ಟಿದವನು ಮಂಗಳ ನೊಳಂಬಾಧಿ ರಾಜ (ಸು. 730-ಸು. 775). ಹೇಮಾವತಿ ಶಾಸನದ ಪ್ರಕಾರ ಇವನು ಕಿರಾತ ನೃಪತಿಯನ್ನು ಜಯಿಸಿದ; ಕರ್ಣಾಟರಿಂ...

ಕರ್ನಾಟಕದ ಪ್ರದರ್ಶನ ಕಲೆಗಳು OEC HISTORY

ಕರ್ನಾಟಕದ ಜಾನಪದ ಕಲೆಗಳು ಗ್ರಾಮೀಣ ಬದುಕಿನ ಅನಕ್ಷರಸ್ಥರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ. ಈ ಜಾನಪದ ಪ್ರಕಾರವನ್ನು ಸಂಸ್ಕೃತಿಯ ಒಂದು ಭಾಗವೆಂದು ಭಾವಿಸಬೇಕಾಗಿರುವುದರಿಂದ ಇದರ ಉಳಿವು ನಮ್ಮ ಕೈಲಿದೆ. ಕಲಾವಿದರಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಈ ಪ್ರಕಾರದ ಜೀವಂತಿಕೆಗೆ ಶ್ರಮಿಸಬೇಕಾದ ಅಗತ್ಯವಿದೆ. ಅನೇಕ ಗ್ರಾಮೀಣ ಕಲೆ ಮತ್ತು ಆಚರಣೆಗಳು ಸಮಾಜದ ಮುಖ್ಯವಾಹಿನಿಗೆ ಬಾರದೆ ಎಲೆಮರೆಯ ಕಾಯಾಗಿ ಮರೆಯಲ್ಲಿಯೇ ಅಳಿದು ಹೋಗುತ್ತಿವೆ. ಅದರ ಸೊಗಡನ್ನು ಉಳಿಸುವ ಮತ್ತು ಮುಂದಿನ ತಲೆಮಾರಿಗೆ ಇದರ ಸವಿಯನ್ನು ಉಳಿಸಿ ಉಣಬಡಿಸುವ ಗುರುತರವಾದ ಜವಾಬ್ದಾರಿಯು ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ. ವೀರಗಾಸೆ ವೀರಗಾಸೆಯು ಸಾಮೂಹಿಕ ನೃತ್ಯವನ್ನೊಳಗೊಂಡ ಕರ್ನಾಟಕದ ಒಂದು ಜನಪದ ಕಲೆ. ಶೈವ ಸಂಪ್ರದಾಯದ ಧಾರ್ಮಿಕ ವೀರನೃತ್ಯ. ನೃತ್ಯದ ನಡುವೆ ಕನಿಷ್ಠ ಎರಡು ಜನ ಕಲಾವಿದರುಗಳು ಸೇರಿ ಒಡಪು ಹೇಳುವ ಕಾರ್ಯಕ್ರಮ ನಡೆಸಿಕೊಟ್ಟರೆ, ಗರಿಷ್ಠ ಮೂವತ್...

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ ಭೂಗೋಳವು ಇತಿಹಾಸದೊಡನೆ ನಿಕಟ ಸಂಬಂಧ ಹೊಂದಿದೆ. ಯಾವುದೇ ಪ್ರದೇಶದ ಮಾನವನ ಜೀವನಕ್ರಮ ಮತ್ತು ಇತಿಹಾಸ ಅಲ್ಲಿನ ಭೌಗೋಳಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ. ಪ್ರಕೃತಿ ಲಕ್ಷಣಗಳಲ್ಲಿ ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ತಕ್ಕಂತೆ ಮಾನವನ ಇತಿಹಾಸದ ಬೆಳವಣಿಗೆಯೂ ಮಾರ್ಪಡುತ್ತದೆ. ಏಕೆಂದರೆ ಪ್ರಕೃತಿಯ ಮೇಲ್ಬಾಗದ ಅವಯವಗಳಾದ ಗಾಳಿ, ನದಿ, ಪರ್ವತ, ಸಮುದ್ರ, ಭೂಗುಣ, ಖನಿಜ ಸಂಪತ್ತು ಇತ್ಯಾದಿಗಳ ಕೈವಾಡ ಆಯಾ ದೇಶದ ಇತಿಹಾಸವನ್ನು ನಿರ್ಧರಿಸುತ್ತದೆ. ಆದ್ದರಿಂದ ಒಂದು ದೇಶದ ಅಥವಾ ಜನಾಂಗದ ಇತಿಹಾಸ ಅರಿಯಲು ಭೂಗೋಳದ ತಿಳಿವಳಿಕೆ ಅತ್ಯವಶ್ಯ. ವಿದೇಶಿ ಪ್ರವಾಸಿಗರ ವರದಿಗಳು ಭೌಗೋಳಿಕ ಪರಿಜ್ಞಾನವಿಲ್ಲದ ಇತಿಹಾಸದ ಅಧ್ಯಯನ ಕೂಡ ವ್ಯರ್ಥ, ಉದಾಹರಣೆಗೆ ಅಶೋಕನ ಸಾಮ್ರಾಜ್ಯ ತುಂಬ ವಿಶಾಲವಾಗಿತ್ತು: ಅತಿ ದೊಡ್ಡದು ಎನ್ನುವಾಗ ಭೌಗೋಳಿಕ ಮೇರೆಗಳ ಚಿತ್ರ ಅತ್ಯವಶ್ಯ. ಅವನ ರಾಜ್ಯ ಪಶ್ಚಿಮದಲ್ಲಿ ಆಫ್ಘಾನಿಸ್ತಾನ, ಉತ್ತರದಲ್ಲಿ ನೇಪಾಳ, ಪೂರ್ವದಲ್ಲಿ ಕಾಮರೂಪ ಹಾಗೂ ದಕ್ಷಿಣದಲ್ಲಿ ನಲ್ಲೂರಿನವರೆಗೂ ವಿಸ್ತರಿಸಿದ್ದಿತು ಎಂದು ವಿವರಿಸಲು ಹಾಗೂ ಸುಲಭ ಗ್ರಹಿಕೆಗೂ ಭೌಗೋಳಿಕ ಅರಿವು ಅವಶ್ಯ. ಹಾಗೆಯೇ ಕಾಲಗಣನೆ (Chronology) ಕೂಡ. ಅದು ಯಾವ ಕಾಲದಲ್ಲಿ ಈ ಘಟನ ಸಂಭವಿಸಿತು: ಅಶೋಕ ಅಥವಾ ಮಹಾತ್ಮಾ ಗಾಂಧಿ ಜೀವಿಸಿದ್ದರು ಎಂಬುದನ್ನು ತಿಳಿಸುತ್ತದೆ, ರಿಚರ್ಡ್ ಹಕ್ಕೂಯತ್ ಹೇಳುವಂತೆ: ಭೂಗೋಳ...