ವಿಷಯಕ್ಕೆ ಹೋಗಿ

ಸುರೇಶ ಮುದ್ದಾರರ ಕವಿತೆ: ವರಗುರು, ಶ್ರೀದತ್ತನಿಗೆ

ವರಗುರು, ಶ್ರೀದತ್ತನಿಗೆ
           
ಅನುದಿನವು ಮೂಡನದಿ
ಉದಯಿಸುವ ರವಿಯಂತೆ
ಚಣಚಣವು ನೀ ಬರುವೆ ಮಿಂಚಿನಂತೆ
ಬಂದು ಮೂಡಲ ಮನೆಯ
ಮುತ್ತುಗಳ ರಾಶಿಯಲಿ
ನಿನ್ನ ಹಾಡಿನು ಉಲಿದು ಕಿರಣದಂತೆ 

ಆಗಸದ ಕಡಲಾಚೆ 
ನಿನ್ನಿರವು ನಿಂತಿಹುದು
ಆಳದಲಿ ಬಹು ಆಳ ನಿನ್ನಾತ್ಮವು
ಬದುಕಿನಾ ಬಂಡಿಯಲಿ
ಬೆಂದು ಬಂದರು ನೀನು
ಮುಕುಟರತ್ನವು ನಿನ್ನ ಬದುಕಿನಿರವು

ಸಾಧನೆಯ ಕೇರಿಯಲಿ
ನಿಂದು ನೀ ಕೈಮಾಡಿ
ಕರೆದು ತೋರಿಸಿದೆ ಗುರು ದರುಶನ
ತಾಂಬುಲದ ತುಟಿಯಂತೆ
ಮುಡಿಯಲ್ಲಿ ಮಲ್ಲಿಗೆಯು 
ಸಂಜೆ ಹೊನ್ನಿನ ನೀರ ಕಡಲಾಚೆಯು

ಗರಿ ಬಿಚ್ಚಿ ನೀ ಹಾಡೆ
ಅರಳು ಮರಳಿನ ಮೇಲೆ
ಬೆಳಗು ಮೂಡಲು ಅಲ್ಲಿ ಉಯ್ಯಾಲೆಯು
ನಾದಲೀಲೆಗೆ ನಮನ
ಗಂಗಾವತರಣದಲಿ
ಶ್ರಾವಣದಿ ಸಖೀಗೀತ ನಭೋವಾಣಿಯು

ಹೃದಯ ಸಮುದ್ರದಿ ಮಿಂದು
ಸೂರ್ಯಪಾನವ ಮಾಡಿ
ಬಾಲಬೋಧೆಗೆ ನಿಂತ ಶ್ರೀಮಾತೆಗೆ
ಉತ್ತರಾಯಣ ಕಾಲ
ಯಕ್ಷ ಯಕ್ಷಿಗೆ ನಮನ
ಕಾವ್ಯವೈಖರಿಯಿಂದ ವಿನಯ ಸಂಚಯವು

ಮುಕ್ತಕಂಠದಿ ಹಾಡಿ
ನಾಕುತಂತಿಯ ಮೀಟಿ
ಜೀವಲಹರಿಯೆ ನಮ್ಮ ಒಲವೇ ಬದುಕು
ಚೈತನ್ಯಪೂಜೆಗದು
ಮತ್ತೆ ಶ್ರಾವಣ ಬಂತು
ಸಾಹಿತ್ಯ ಮೇರುವಿನ ವಿರಾಟ್ ಸ್ವರೂಪವು

ಕನ್ನಡದ ವರಕವಿಯೆ
ಭೂತಾಯಿ ವರಸುತನೆ
ಚತುರೋಕ್ತಿ ನುಡಿಗಳ ಶಬ್ಧಗಾರುಡಿಗ
ಅರವಿಂದರನುಯಾಯಿ
ಭಗವತಿಯ ವೇದದನಿ
ಧಾರಾನಗರದಿ ನಿಂದ ದತ್ತಾತ್ರೇಯ

ಯುಗಯುಗದ ವಾತ್ಸಲ್ಯ
ರಸದ ಹೊನಲನು ಹರಿಸಿ
ಒಲವ ಬಳ್ಳಿಯನೆಲ್ಲ ಹಬ್ಬಿತಬ್ಬಿ
ನನ್ನಾತ್ಮ ನೀ ಗುರುವೆ
ಸ್ವಚ್ಛಂದದಾಯಕನೆ
ನೆಲೆಸೆನ್ನ ಹೃದಯದೊಳು ಅಂಬಿಕಾತನಯ
                   *ಸುರೇಶ ಮುದ್ದಾರ*

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ

ಭಾರತದ ಪ್ರಮುಖ ಭೌಗೋಳಿಕ ಲಕ್ಷಣಗಳು ಮತ್ತು ಅವುಗಳ ಪ್ರಭಾವ ಭೂಗೋಳವು ಇತಿಹಾಸದೊಡನೆ ನಿಕಟ ಸಂಬಂಧ ಹೊಂದಿದೆ. ಯಾವುದೇ ಪ್ರದೇಶದ ಮಾನವನ ಜೀವನಕ್ರಮ ಮತ್ತು ಇತಿಹಾಸ ಅಲ್ಲಿನ ಭೌಗೋಳಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ. ಪ್ರಕೃತಿ ಲಕ್ಷಣಗಳಲ್ಲಿ ಬದಲಾವಣೆಯಾಗುತ್ತಲೇ ಇರುತ್ತದೆ. ಅದಕ್ಕೆ ತಕ್ಕಂತೆ ಮಾನವನ ಇತಿಹಾಸದ ಬೆಳವಣಿಗೆಯೂ ಮಾರ್ಪಡುತ್ತದೆ. ಏಕೆಂದರೆ ಪ್ರಕೃತಿಯ ಮೇಲ್ಬಾಗದ ಅವಯವಗಳಾದ ಗಾಳಿ, ನದಿ, ಪರ್ವತ, ಸಮುದ್ರ, ಭೂಗುಣ, ಖನಿಜ ಸಂಪತ್ತು ಇತ್ಯಾದಿಗಳ ಕೈವಾಡ ಆಯಾ ದೇಶದ ಇತಿಹಾಸವನ್ನು ನಿರ್ಧರಿಸುತ್ತದೆ. ಆದ್ದರಿಂದ ಒಂದು ದೇಶದ ಅಥವಾ ಜನಾಂಗದ ಇತಿಹಾಸ ಅರಿಯಲು ಭೂಗೋಳದ ತಿಳಿವಳಿಕೆ ಅತ್ಯವಶ್ಯ. ವಿದೇಶಿ ಪ್ರವಾಸಿಗರ ವರದಿಗಳು ಭೌಗೋಳಿಕ ಪರಿಜ್ಞಾನವಿಲ್ಲದ ಇತಿಹಾಸದ ಅಧ್ಯಯನ ಕೂಡ ವ್ಯರ್ಥ, ಉದಾಹರಣೆಗೆ ಅಶೋಕನ ಸಾಮ್ರಾಜ್ಯ ತುಂಬ ವಿಶಾಲವಾಗಿತ್ತು: ಅತಿ ದೊಡ್ಡದು ಎನ್ನುವಾಗ ಭೌಗೋಳಿಕ ಮೇರೆಗಳ ಚಿತ್ರ ಅತ್ಯವಶ್ಯ. ಅವನ ರಾಜ್ಯ ಪಶ್ಚಿಮದಲ್ಲಿ ಆಫ್ಘಾನಿಸ್ತಾನ, ಉತ್ತರದಲ್ಲಿ ನೇಪಾಳ, ಪೂರ್ವದಲ್ಲಿ ಕಾಮರೂಪ ಹಾಗೂ ದಕ್ಷಿಣದಲ್ಲಿ ನಲ್ಲೂರಿನವರೆಗೂ ವಿಸ್ತರಿಸಿದ್ದಿತು ಎಂದು ವಿವರಿಸಲು ಹಾಗೂ ಸುಲಭ ಗ್ರಹಿಕೆಗೂ ಭೌಗೋಳಿಕ ಅರಿವು ಅವಶ್ಯ. ಹಾಗೆಯೇ ಕಾಲಗಣನೆ (Chronology) ಕೂಡ. ಅದು ಯಾವ ಕಾಲದಲ್ಲಿ ಈ ಘಟನ ಸಂಭವಿಸಿತು: ಅಶೋಕ ಅಥವಾ ಮಹಾತ್ಮಾ ಗಾಂಧಿ ಜೀವಿಸಿದ್ದರು ಎಂಬುದನ್ನು ತಿಳಿಸುತ್ತದೆ, ರಿಚರ್ಡ್ ಹಕ್ಕೂಯತ್ ಹೇಳುವಂತೆ: ಭೂಗೋಳ...

ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture)

1.1 ಭಾರತೀಯ ಸಂಸ್ಕೃತಿಯ ಲಕ್ಷಣಗಳು (Characteristics of Indian Culture) ಭಾರತದ ಸಾಂಸ್ಕೃತಿಕ ಪರಂಪರೆಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದೆ. ಮಾನವನ ಉಗಮದೊಂದಿಗೆ ಉಗಮವಾಗಿ ಬೆಳೆದು ಸಾಗಿ ಬಂದ ಪರಂಪರೆಯು ಅವನ ಜೀವನ ಮೌಲ್ಯಗಳು, ವಸತಿ ರಕ್ಷಣೆ, ಆಹಾರ, ವಿಹಾರ, ಉಡುಗೆ-ತೊಡುಗೆ, ಮನರಂಜನೆ, ವ್ಯಾಪಾರ, ವಾಣಿಜ್ಯ, ಸಂಗೀತ, ಕಲೆ, ವಾಸ್ತುಶಿಲ್ಪ, ಚಿತ್ರಕಲೆ, ಶಿಕ್ಷಣ, ಧರ್ಮಗಳು, ರೂಢಿ-ಸಂಪ್ರದಾಯಗಳು, ಭಾಷೆ, ನಟನೆ, ನಂಬಿಕೆ, ನೃತ್ಯ, ಆಚರಣೆ, ಹವ್ಯಾಸ, ಸಾಹಿತ್ಯ, ವಿಧಿ-ವಿಧಾನಗಳನ್ನು ಒಳಗೊಂಡಿದೆ. ಈ ಅಂಶಗಳಲ್ಲಿ ಕೆಲವು ಕಾಲಕ್ಕೆ ತಕ್ಕಂತೆ ಮತ್ತು ಪ್ರಾದೇಶಿಕವಾಗಿ ಭಿನ್ನತೆ ಹಾಗೂ ಬದಲಾವಣೆಗೊಂಡಿದ್ದರೂ ನಿರಂತರವಾಗಿ ಸಾಗಿ ಬಂದಿವೆ. ಅವುಗಳ ಗುಣ ಲಕ್ಷಣಗಳು ಈ ಕೆಳಗಿನಂತಿವೆ: 1. ಸಾಂಪ್ರದಾಯಕ ಜೀವನ ವಿಧಾನ: ಭಾರತೀಯರ ಜೀವನ ವಿಧಾನ ಪಾರಂಪರಗತವಾಗಿ ಪೂರ್ವಜರಿಂದ ಸಾಗಿ ಬಂದಿದೆ. ಪಾರಂಪರಗತವಾಗಿ ಭಾರತೀಯರದು ಕೃಷಿ ಪ್ರಧಾನವಾದ ಜೀವನ ವಿಧಾನವಾಗಿದ್ದು, ಭೂಮಿಯನ್ನು 'ಭೂದೇವಿ' ಎಂದು ಆರಾಧಿಸುತ್ತಾರೆ. ಭೂಮಿಯನ್ನು ಹಸನಗೊಳಿಸಿ, ಹದ ಮಾಡಿ, ಉತ್ತಿ-ಬಿತ್ತುವ ಪೂರ್ವದಲ್ಲಿ ಭೂದೇವಿಗೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಕಾಯಕವನ್ನು ಪ್ರಾರಂಭಿಸುತ್ತಾರೆ. ಕಾಲಕಾಲಕ್ಕೆ ಮಳೆಯಾಗಿ, ಸಮೃದ್ಧವಾದ ಬೆಳೆಯನ್ನು ಕೊಡುವ ಮೂಲಕ ನಿನ್ನ ಮಕ್ಕಳನ್ನು ಸಲಹು ತಾಯಿ ಎಂದು ಬೇಡಿಕೊಳ್ಳುತ್ತಾರೆ. ಕೃಷಿ ಸಲಕರಣಗಳಲ್ಲಿ, ಬಿತ್ತುವ ಬೀಜಗಳಲ್...

DSC-2 ಭಾರತದ ಸಾಂಸ್ಕೃತಿಕ ಪರಂಪರೆ::ಪೌರಾಣಿಕ ಐತಿಹ್ಯಗಳು: ಮಹಾಭಾರತ ಮತ್ತು ರಾಮಾಯಣ, ಪಂಚತಂತ್ರ

ಐತಿಹ್ಯ ಗಳು: ಇಂಗ್ಲೀಷಿನ Legend ಎಂಬ ಪದಕ್ಕೆ ಸಮನಾಗಿ ಇಂದು ನಾವು ‘ಐತಿಹ್ಯ’ ಎಂಬುದನ್ನು ಪ್ರಯೋಗಿಸುತ್ತಿದ್ದೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುವುದಕ್ಕಿಂತ ಹಿಂದಿನಿಂದಲೇ ‘ಐತಿಹ್ಯ’ ಎಂಬ ಶಬ್ದಪ್ರಯೋಗ ನಮ್ಮಲ್ಲಿ ತಕ್ಕಷ್ಟು ರೂಢವಾಗಿದೆ. ಸಾಮಾನ್ಯರು ಇತಿಹಾಸವೆಂದು ನಂಬಿಕೊಂಡು ಬಂದ ಘಟನೆ ಅಥವಾ ಕಥನವೆಂಬ ಅರ್ಥದಲ್ಲಿ ಅದು ಪ್ರಯೋಗಗೊಳ್ಳುತ್ತಿದ್ದುದನ್ನು ನಾವು ಆಗೀಗ ಕಾಣುತ್ತೇವೆ. ಜಾನಪದ ಶಾಸ್ತ್ರವಾಗಿ ಬೆಳೆಯುತ್ತ ಬಂದದ್ದರಿಂದ ಅದೊಂದು ನಿಶ್ಚಿತ ಪರಿಕಲ್ಪನೆಯಾಯಿತೆಂದು ಹೇಳಬೇಕಾಗುತ್ತದೆ. ಐತಿಹ್ಯದ ಮೂಲವಾದ `Legend’ ಎಂಬ ಪದ ಮಧ್ಯಕಾಲೀನ ಲ್ಯಾಟಿನ್ನಿನ ಲೆಜಂಡಾ (Legenda) ಎಂಬ ರೂಪದಿಂದ ನಿಷ್ಪನ್ನವಾದುದು. ಇದರರ್ಥ ಪಠಿಸಬಹುದಾದದ್ದು, ಎಂದು”.ಇದಕ್ಕೆ ಯುರೋಪಿನಲ್ಲಿ ಸಾಧುಸಂತರ ಕಥೆಗಳು ಎಂಬಂಥ ಅರ್ಥಗಳು ಮೊದಲಲ್ಲಿ ಪ್ರಚಲಿತವಿದ್ದುದಾಗಿ ತಿಳಿದು ಬರುತ್ತದೆ.“ಲೆಜೆಂಡಾ” ಅಥವಾ “ಐತಿಹ್ಯ” ವೆಂಬುದು ಈ ಅರ್ಥಗಳಿಂದ ಸಾಕಷ್ಟು ದೂರ ಸರಿದಿದೆಯೆಂದು ಬೇರೆ ಹೇಳಬೇಕಾಗಿಲ್ಲ. ಐತಿಹ್ಯವೆಂದರೆ ಈಗ ವ್ಯಕ್ತಿ, ಸ್ಥಳ ಅಥವಾ ಘಟನೆಯೊಂದರ ಸುತ್ತ ಸಾಂಪ್ರದಾಯಿಕವಾಗಿ ಮತ್ತು ಯಾವುಯಾವುವೋ ಮೂಲ ಸಂಗತಿಗಳ ಮೇಲೆ ಆಧರಿತವಾಗಿ ಬಂದ ಕಥನ ಎಂದು ಸಾಮಾನ್ಯವಾದ ಅರ್ಥ ಪಡೆದುಕೊಂಡಿದೆ. “ಐತಿಹ್ಯ” ಕೆಲವು ವೇಳೆ ಸತ್ಯ ಘಟನೆಯೊಂದರಿಂದಲೇ ಹುಟ್ಟಿಕೊಂಡಿರಬಹುದು; ಎಂದರೆ, ಅದು ನಿಜವಾದ ಚರಿತ್ರೆಯನ್ನೊಳಗೊಂಡಿರಬಹುದು. ಆದರೆ ಯಾವತ್ತೂ ಅದರಲ್ಲಿ ಚರಿತ್ರೆಯೇ ಇರುತ...