ಧೊಂಡಿಯ ವಾಘ್ ೧೮ನೆಯ ಶತಮಾನದ ಅಂತ್ಯದ ವೇಳೆ ಆಗಿನ ಮೈಸೂರು ಪ್ರಾಂತ್ಯ ಮತ್ತು ಸುತ್ತಮುತ್ತ ಒಬ್ಬ ಸೈನಿಕನಾಗಿ, ಅಶ್ವದಳದ ನಾಯಕನಾಗಿ, ಕೆಲವು ಪ್ರದೇಶಗಳ ಒಡೆಯನಾಗಿ, ಬ್ರಿಟೀಶರ ವಿರುದ್ಧ ಮೈಸೂರು ಪ್ರಾಂತ್ಯದಲ್ಲಿ ಹೋರಾಟ ಮಾಡಿದ ಒಬ್ಬ ಸಾಹಸಿ ಧೊಂಡಿಯ ವಾಘ್. ಕೆಳದಿಯ ಸಂಸ್ಥಾನದಲ್ಲಿ ಕರಣಿಕರಿಗೆ ಸಹಾಯಕನಾಗಿ ವೃತ್ತಿ ಆರಂಭಿಸಿದ. ನಂತರ ಮೈಸೂರಿನ ಹೈದರಾಲಿ ಸೈನ್ಯದಲ್ಲಿ ಸೈನಿಕನಾಗಿ ಸೇರಿದ. ಮೂರನೇ ಮೈಸೂರು ಯುದ್ಧದ ನಂತರ ಈ ಸೈನ್ಯವನ್ನು ತೊರೆದು ಸ್ವತಂತ್ರವಾಗಿ ಸೈನ್ಯ ಕಟ್ಟಿ ಹರಿಹರ (ಊರು), ಸವಣೂರು ಮುಂತಾದ ಊರುಗಳನ್ನು ಗೆದ್ದು ತನ್ನ ಪ್ರಭಾವವನ್ನು ವಿಸ್ತರಿಸಲು ಪ್ರಯತ್ನಿಸಿದ. ಮರಾಠಾರೊಂದಿಗೆ ಸೋತ ಕಾರಣ ಮತ್ತೆ ಟಿಪ್ಪುವನ್ನು ಆಶ್ರಯಿಸಲು ನಿಶ್ಚಯಿಸಿದ. ಮತಾಂತರ ಹೊಂದಲು ಹೇಳಿ ಮಲಿಕ ಜಹಾನ್ ಖಾನ ಎಂದು ಹೆಸರಿಸಿದರು. ಆದರೆ ಮತಾಂತರ ಹೊಂದದ ಕಾರಣದಿಂದ ಟಿಪ್ಪು ಈತನನ್ನು ೫ ವರ್ಷಗಳ ಕಾಲ ಬಂಧನದಲ್ಲಿ ಇರಿಸಿದ. ನಾಲ್ಕನೆಯ ಮೈಸೂರು ಯುದ್ಧದಲ್ಲಿ ಟಿಪ್ಪು ಸೋತ ನಂತರ ಧೊಂಡಿಯ ಶ್ರೀರಂಗಪಟ್ಟಣದಿಂದ ತಪ್ಪಿಸಿಕೊಂಡು ಮತ್ತೆ ತನ್ನ ಪ್ರಭುತ್ವವನ್ನು ಸ್ಥಾಪಿಸಲು ಪ್ರಯತ್ನಿಸಿ ಉಭಯಲೋಕಾಧೀಶ್ವರ ಎನ್ನಿಸಿಕೊಂಡ. ಕಡೆಯಲ್ಲಿ ಬ್ರಿಟೀಷರೊಡನೆ ಹೋರಾಡುತ್ತಾ ೧೮೦೦ರಲ್ಲಿ ಮರಣ ಹೊಂದಿದ. ಧೊಂಡಿಯ ಚೆನ್ನಗಿರಿಯಲ್ಲಿ ೧೮ನೇ ಶತಮಾನದ ಉತ್ತರ ಭಾಗದಲ್ಲಿ ಹುಟ್ಟಿದ. ಮರಾಠಿ ಪವಾರ್ ಪಂಗಡದ ಒಂದು ಸಾಮಾನ್ಯ ಪರಿವಾರದಲ್ಲಿ ಇವರ ಜನನ. ಆ ...
ಸಾಹಿತ್ಯ, ಸಂಸ್ಕೃತಿ, ಇತಿಹಾಸ, ಸಂಶೋಧನಾ ವೇದಿಕೆ. ಶಂಕರ ನಿಂಗನೂರ